ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಯು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಯತ್ತ ವೈದ್ಯಕೀಯ ಶಿಕ್ಷಣ ಸಂಸ್ಥೆಯಾಗಿದೆ. ಈ ಸಂಸ್ಥೆಯು ಕರ್ನಾಟಕದ ರಾಜದಾನಿಯಾದ ಬೆಂಗಳೂರಿನಿಂದ 90 ಕಿಲೋಮೀಟರ್ ದೂರದಲ್ಲಿದ್ದು, ರಾಜ್ಯ ಹೆದ್ದಾರಿ ಸಂಖ್ಯೆ 17 (ಬೆಂಗಳೂರು - ಮೈಸೂರು ರಸ್ತೆ) ರಲ್ಲಿದೆ.

 

ವೈದ್ಯಕೀಯ ಕಾಲೇಜು ಮತ್ತು ಅದರ ಪೂರಕಗಳು 25 ಎಕರೆ ವಿಸ್ತೀರ್ಣದ ಆವರಣದಲ್ಲಿದೆ. ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ 750 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಇದೆ. ಸಂಸ್ಥೆಯ ಆವರಣದಲ್ಲಿ ಬೋಧಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಶೂಶ್ರೂಷಾಧಿಕಾರಿಗಳಿಗೆ ಪ್ರತ್ಯೇಕವಾದ ವಸತಿಗೃಹಗಳಿವೆ. ಎಂ.ಬಿ.ಬಿ.ಎಸ್. ಮತ್ತು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ (ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ) ವಸತಿಗೃಹಗಳಿವೆ.

 

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಯು ಶೇ. 100 ಮೆರಿಟ್ ಆಧಾರಿತ ಸಂಸ್ಥೆಯಾಗಿದ್ದು, ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.  ಎಂ.ಬಿ.ಬಿ.ಎಸ್. ಒಟ್ಟು ಸೀಟುಗಳಲ್ಲಿ ಶೇ.85% ಸೀಟುಗಳನ್ನು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳಿಂದ ಮತ್ತು ಶೇ 15% ಸೀಟುಗಳನ್ನು ಅಖಿಲ ಭಾರತ ವಿದ್ಯಾರ್ಥಿಗಳಿಂದ ಆಯ್ಕೆ ಮಾಡಲಾಗುತ್ತದೆ ಹಾಗೂ ಸ್ನಾತಕೋತ್ತರ ವಿಭಾಗಗಳ ಒಟ್ಟು ಸೀಟುಗಳಲ್ಲಿ ಶೇ.50% ಸೀಟುಗಳನ್ನು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳಿಂದ ಮತ್ತು ಶೇ 50% ಸೀಟುಗಳನ್ನು ಅಖಿಲ ಭಾರತ ವಿದ್ಯಾರ್ಥಿಗಳಿಂದ ಆಯ್ಕೆ ಮಾಡಲಾಗುತ್ತದೆ.

 

ಈ ಸಂಸ್ಥೆಯು 2005 ರಲ್ಲಿ ಪ್ರಾರಂಭವಾಗಿದ್ದು, ಮೊದಲನೆ ಬ್ಯಾಚ್‌ನ 100 ವಿದ್ಯಾರ್ಥಿಗಳು 2006 ರಲ್ಲಿ ಪ್ರವೇಶ ಪಡೆದಿರುತ್ತಾರೆ. ನಂತರ 2016-17 ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲಾಗಿದ್ದು, ಹಾಲಿ ಪ್ರತಿ ವರ್ಷ 150 ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುತ್ತಿರುತ್ತಾರೆ.

 

2010-11 ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶವನ್ನು ಪ್ರಾರಂಭಿಸಲಾಗಿದ್ದು, ಸಂಸ್ಥೆಯ ಬಹುತೇಕ ಎಲ್ಲಾ ವಿಭಾಗಗಳಿಂದ ಪ್ರತಿ ವರ್ಷ 66 ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ಪ್ರವೇಶಾತಿಗೆ ಭಾರತೀಯ ವೈದ್ಯಕೀಯ ಮಂಡಳಿಯು ಅನುಮತಿ ನೀಡಿದ್ದು, ಹಾಲಿ 142 ಸ್ನಾತಕೋತ್ತರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ.

 

ಇತ್ತೀಚಿನ ನವೀಕರಣ​ : 23-07-2022 01:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080